ಕಲ್ಲೇಗದಲ್ಲಿ ಕಲ್ಲುರ್ಟಿ ಕಲ್ಕುಡ ದೈವ ಕಟ್ಟುವ ಕಲಾದರಾದ ಹೊನ್ನಪ್ಪ ಕಲ್ಲೇಗರು ಅಪಾರ ತುಳು ಅಭಿಮಾನಿ ,ಸಾಹಿತ್ಯದ ಕುರಿತು ಕೂಡ ಒಲವುಳ್ಳವರು ತುಳು ಸಾಹಿತ್ಯ ಸಂಸ್ಕೃತಿಗೆ ಸಂಬಂಧಿಸಿದ ಅನೇಕ ಪುಸ್ತಕಗಳನ್ನು ಕೊಂಡು ಓದುವ ಹವ್ಯಾಸ ಇವರದು
ಮಾಯ ಮತ್ತು ಜೋಗದ ಬೆಳಕಿನಲ್ಲಿ ಕರಾವಳಿಯ ಸಾವಿರದೊಂದು ದೈವಗಳು ಗ್ರಂಥದ ಮಾಹಿತಿಗಾಗಿ ಸಂಪರ್ಕಿಸಿ - ಡಾ.ಲಕ್ಷ್ಮೀ ಜಿ ಪ್ರಸಾದ್, ಮೊಬೈಲ್ :9480516684 ತುಳು ಸಂಸ್ಕೃತಿಯ ಹೊನ್ನ ಕಲಶಕ್ಕೆ ಇರಿಸಿದ ವನಿಲುಗರಿ - ಡಾ.ನಾ ಮೊಗಸಾಲೆ ಡಾ. ಲಕ್ಷ್ಮೀ ಪ್ರಸಾದ್ (ಲಕ್ಷ್ಮೀ ವಾರಣಾಸಿ) ಅವರು ಕಾಸರಗೋಡು ಜಿಲ್ಲೆಯ ಕೋಳ್ಯೂರು ಗ್ರಾಮದ ವಾರಣಾಸಿ ಮೂಲದವರು. ಇವರ ತಂದೆ ವೇದಮೂರ್ತಿ ನಾರಾಯಣ ಭಟ್ಟರು ವಿದ್ವಾಂಸರೆಂದು ಪ್ರಸಿದ್ಧರು. ತನ್ನ ಮನೆತನವು ವೈದಿಕಾಚರಣೆಯನ್ನೇ ಹೊಂದಿದ್ದರೂ, ಕುಟುಂಬದಲ್ಲಿ ದೈವದ ಆರಾಧನೆಯನ್ನು ಮಾಡುತ್ತಿರುವುದೇಕೆ ಎಂಬ ಕುತೂಹಲವೇ ಡಾ. ಲಕ್ಷ್ಮೀ ಪ್ರಸಾದ್ ಅವರಿಗೆ ಪ್ರೇರಣೆಯಾಗಿ ಅವರು ಈ ಕುರಿತಾದ ಸಂಶೋಧನೆಗೆ ಇಳಿದರು. ಇದರಿಂದ ಕರಾವಳಿ ಕರ್ನಾಟಕದ ಅಂದರೆ ಅವಿಭಜಿತ ದ.ಕ.ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ ಮತ್ತು ಕೊಡಗನ್ನೂ ಒಳಗೊಂಡಂತೆ ದೈವರಾಧನೆಯ ಆಶಯ ಆಕೃತಿಯನ್ನು ನಿರಂತರ ಸಂಶೋಧಿಸಲು ಅವರು ಮುಂದಾದರು. ಈ ನಿರಂತರತೆ ಇಪ್ಪತ್ತೊಂದು ವರುಷಗಳ ಕಾಲ ನಡೆದುದರ ಪರಿಣಾಮವಾಗಿ ಈ ಮೇಲಿನ ಪ್ರದೇಶಗಳಲ್ಲಿ ಒಟ್ಟು ಎರಡು ಸಾವಿರದ ಇನ್ನೂರ ಮೂವತ್ತು ದೈವಗಳು ಆರಾಧಿಸಲ್ಪಡುತ್ತವೆ ಎನ್ನುವ ಸತ್ಯ ಗೋಚರಿಸಿತು. ಹಿರಿಯ ಜಾನಪದ ತಜ್ಞರೂ ವಿದ್ವಾಂಸರೂ ಆಗಿರುವ ಪ್ರೊ| ಬಿ.ಎ.ವಿವೇಕ ರೈ ಅವರು ತಮ್ಮ ಮಹಾಪ್ರಬಂಧದಲ್ಲಿ (1985) ಇನ್ನೂರ ಅರುವತ್ತೇಳು ,ಇನ್ನೋರ್ವ ಜಾನಪದ ವಿದ್ವಾಂಸ ಪ್ರೊ| ಚಿನ್ನಪ್ಪಗೌಡರು ಇದನ್ನು ಪರಿಷ್ಕರಿಸಿ ತಮ್ಮ ಮಹಾಪ...
Comments
Post a Comment